Mark 14:65 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.
Kannada BSI Bible 2016
ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಕೆಲವರು ಆತನನ್ನು ಉಗುಳಿ ಆತನ ಮುಖಕ್ಕೆ ಮುಸುಕುಹಾಕಿ ಗುದ್ದಿ - ಪ್ರವಾದನೆ ಹೇಳು ಅನ್ನುತ್ತಿದ್ದರು. ಮತ್ತು ಓಲೇಕಾರರು ಆತನ ಕೆನ್ನೆಗೆ ಏಟು ಹಾಕುತ್ತಾ ತಮ್ಮ ವಶಕ್ಕೆ ತೆಗೆದುಕೊಂಡರು.
Kannada Bible (KNCL) BSI 2016
ಅನಂತರ, ಅವರಲ್ಲಿ ಕೆಲವರು ಯೇಸುವಿನ ಮೇಲೆ ಉಗುಳಿದರು. ಅವರ ಮುಖಕ್ಕೆ ಮುಸುಕುಹಾಕಿ, ಅವರನ್ನು ಗುದ್ದಿ, “ಗುದ್ದಿದವರು ಯಾರು? ಪ್ರವಾದಿಸು ನೋಡೋಣ,” ಎನ್ನುತ್ತಿದ್ದರು. ಇದಲ್ಲದೆ ಅಲ್ಲಿದ್ದ ಪಹರೆಯವರು ಅವರಿಗೆ ಏಟಿನ ಮೇಲೆ ಏಟು ಕೊಟ್ಟು ತಮ್ಮ ವಶಕ್ಕೆ ತೆಗೆದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.