Mark 14:68 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಪೇತ್ರನು ಆಕೆಯ ಮಾತನ್ನು ನಿರಾಕರಿಸಿ, “ನೀನು ಏನು ಹೇಳುತ್ತಿರುವೆಯೋ ನನಗೆ ತಿಳಿಯದು” ಎಂದು ಹೇಳಿ ಎದ್ದು, ಅಂಗಳದ ಪ್ರವೇಶದ್ವಾರದ ಬಳಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
Kannada BSI Bible 2016
ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಅಲ್ಲ; ನೀನು ಏನನ್ನುತ್ತೀಯೋ ನನಗೆ ಗೊತ್ತಿಲ್ಲ, ತಿಳಿಯುವದಿಲ್ಲ ಎಂದು ಹೇಳಿ ಹೊರಂಗಳಕ್ಕೆ ಹೋದನು.
Kannada Bible (KNCL) BSI 2016
ಪೇತ್ರನು ಆಕೆ ಹೇಳಿದ್ದನ್ನು ನಿರಾಕರಿಸಿದನು. “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ; ನನಗೇನೂ ತಿಳಿಯದು,” ಎಂದುಬಿಟ್ಟನು. ಅಲ್ಲಿಂದ ಎದ್ದು ದ್ವಾರಮಂಟಪಕ್ಕೆ ಹೋದನು (ಆಗ ಕೋಳಿ ಕೂಗಿತು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು.