Mark 14:71 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪೇತ್ರನು ತನಗೆ ಶಾಪ ಹಾಕಿಕೊಳ್ಳುತ್ತಾ “ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ, ನೀವು ಹೇಳುತ್ತಿರುವ ಈ ಮನುಷ್ಯನನ್ನು ನಾನು ತಿಳಿದಿಲ್ಲ!” ಎಂದು ಬಲವಾಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
Kannada BSI Bible 2016
ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು - ನೀವು ಹೇಳುವ ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿ ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಕೋಳಿ ಎರಡನೆಯ ಸಾರಿ ಕೂಗಿತು.
Kannada Bible (KNCL) BSI 2016
ಆಗ ಪೇತ್ರನು, “ನೀವು ಹೇಳುವ ಆ ಮನುಷ್ಯ ಯಾರೆಂದು ನಾನರಿಯೆ,” ಎಂದು ಹೇಳಿ ಆಣೆಯಿಡುವುದಕ್ಕೂ ಶಪಿಸಿಕೊಳ್ಳುವುದಕ್ಕೂ ತೊಡಗಿದನು. ಕೂಡಲೇ ಕೋಳಿ ಎರಡನೆಯ ಸಾರಿ ಕೂಗಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿ, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ,” ಎಂದನು.