Mark 15:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.
Kannada BSI Bible 2016
ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಗಾದ ಕೂಡಲೆ ಮಹಾಯಾಜಕರೂ ಹಿರಿಯರೂ ಶಾಸ್ತ್ರಿಗಳೂ ಹಿರೀಸಭೆಯವರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.
Kannada Bible (KNCL) BSI 2016
ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.