Mark 15:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು. ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.
Kannada BSI Bible 2016
ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಿಲಾತನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.
Kannada Bible (KNCL) BSI 2016
“ಏಕೆ ಇವನೇನು ಮಾಡಿದ್ದಾನೆ?” ಎಂದು ಪಿಲಾತನು ಮತ್ತೆ ಅವರನ್ನು ಪ್ರಶ್ನಿಸಲು ಅವರು, “ಅವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.