Mark 15:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
Kannada BSI Bible 2016
ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಪಿಲಾತನು ಜನರ ಮನಸ್ಸನ್ನು ಸಮಾಧಾನಪಡಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
Kannada Bible (KNCL) BSI 2016
ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.