Mark 15:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೈನಿಕರು ಯೇಸುವಿನ ಮೇಲೆ ಕಡುಕೆಂಪಾದ ನಿಲುವಂಗಿಯನ್ನು ಹಾಕಿ ಮುಳ್ಳಿನ ಬಳ್ಳಿಗಳಿಂದ ಒಂದು ಕಿರೀಟ ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು.
Kannada BSI Bible 2016
ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನಿಗೆ ಕೆಂಪು ಒಲ್ಲಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನಿಗಿಟ್ಟು -
Kannada Bible (KNCL) BSI 2016
ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿದರು. ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವಿಗೆ ಕಡುಗೆಂಪು ಬಣ್ಣದ ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲೆ ಇಟ್ಟರು.