Mark 15:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
Kannada BSI Bible 2016
ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ಒಲ್ಲಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕೆ ತೆಗೆದುಕೊಂಡು ಹೋದರು.
Kannada Bible (KNCL) BSI 2016
ಹೀಗೆ ಯೇಸುವನ್ನು ಪರಿಹಾಸ್ಯಮಾಡಿದ ಬಳಿಕ, ಆ ನಸುಗೆಂಪು ಮೇಲಂಗಿಯನ್ನು ತೆಗೆದುಹಾಕಿ, ಅವರ ಬಟ್ಟೆಯನ್ನೇ ಮತ್ತೆ ತೊಡಿಸಿದರು. ಬಳಿಕ ಶಿಲುಬೆಗೆ ಏರಿಸುವುದಕ್ಕಾಗಿ ಅವರನ್ನು ಕರೆದುಕೊಂಡುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದ ಮೇಲೆ ಕಡುಗೆಂಪು ಬಣ್ಣದ ಬಟ್ಟೆಯನ್ನು ಅವರಿಂದ ತೆಗೆದುಹಾಕಿ ಅವರ ಸ್ವಂತ ಬಟ್ಟೆಗಳನ್ನು ಅವರಿಗೆ ಉಡಿಸಿ ಶಿಲುಬೆಗೆ ಹಾಕುವುದಕ್ಕಾಗಿ ತೆಗೆದುಕೊಂಡು ಹೋದರು.