Mark 15:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.
Kannada BSI Bible 2016
ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು. ಇವನು ಯಾರಂದರೆ - ಅಲೆಕ್ಸಾಂದ್ರ ರೂಫ ಎಂಬವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.
Kannada Bible (KNCL) BSI 2016
ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಈತನು ಅಲೆಕ್ಸಾಂಡರ್ ಹಾಗೂ ರೂಫ ಎಂಬವರ ತಂದೆ. ಯೇಸುಸ್ವಾಮಿಯ ಶಿಲುಬೆಯನ್ನು ಹೊರುವಂತೆ ಸೈನಿಕರು ಅವನನ್ನು ಬಲವಂತಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲೆಕ್ಸಾಂದ್ರ ಮತ್ತು ರೂಫ ಎಂಬುವರ ತಂದೆಯಾದ ಕುರೇನೆದ ಸೀಮೋನನು ಗ್ರಾಮದಿಂದ ಹಾದು ಹೋಗುತ್ತಿರುವಾಗ, ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.