Mark 15:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದರು. (ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’).
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ.
Kannada BSI Bible 2016
ಕಪಾಲ ಸ್ಥಳ ಎಂದರ್ಥವುಳ್ಳ ಗೊಲ್ಗೊಥಾ ಎಂಬ ಸ್ಥಳಕ್ಕೆ ಅವರು ಆತನನ್ನು ತೆಗೆದು ಕೊಂಡು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನನ್ನು ಗೊಲ್ಗೊಥಾ ಎಂಬ ಸ್ಥಳಕ್ಕೆ ಕರಕೊಂಡು ಬಂದರು. ಗೊಲ್ಗೊಥಾ ಅಂದರೆ ಕಪಾಲಸ್ಥಳ.
Kannada Bible (KNCL) BSI 2016
ಬಳಿಕ ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’ ಎಂದು ಅರ್ಥ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ “ತಲೆಬುರುಡೆಯ ಸ್ಥಳ” ಎಂದು ಅರ್ಥವಿದ್ದ “ಗೊಲ್ಗೊಥಾ” ಎಂಬ ಸ್ಥಳಕ್ಕೆ ಅವರು ಯೇಸುವನ್ನು ತೆಗೆದುಕೊಂಡು ಬಂದರು.