Mark 15:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು.
Kannada BSI Bible 2016
ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವ ಯಾವದು ಯಾರಾರಿಗೆ ಆಗಬೇಕೆಂದು ಚೀಟುಹಾಕಿ ಪಾಲುಮಾಡಿಕೊಂಡರು.
Kannada Bible (KNCL) BSI 2016
ಕೊನೆಗೆ ಅವರನ್ನು ಶಿಲುಬೆಗೆ ಏರಿಸಿದರು. ಅವರ ಬಟ್ಟೆಗಳನ್ನು ಯಾವುಯಾವುದು ಯಾರು ಯಾರಿಗೆ ಸಿಗಬೇಕೆಂದು ತಿಳಿಯಲು ಚೀಟುಹಾಕಿ ತಮ್ಮತಮ್ಮೊಳಗೆ ಹಂಚಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ಬಟ್ಟೆಗಳನ್ನು ಪಾಲುಮಾಡಿಕೊಂಡರು. ಯಾರಿಗೆ ಯಾವುದು ಬರುವುದೋ ಎಂದು ಚೀಟುಹಾಕಿದರು.