Mark 15:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.
Kannada BSI Bible 2016
ಇಸ್ರಾಯೇ ಲ್ಯರ ಅರಸನಾದ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ನೋಡಿ ನಂಬುವೆವು ಎಂದು ತಮ್ಮಲ್ಲಿ ಅಂದುಕೊಂಡರು; ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರೂ ಆತನನ್ನು ದೂಷಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದುಬಂದರೆ ನಾವು ನೋಡಿ ನಂಬೇವು ಎಂದು ತಮ್ಮತಮ್ಮೊಳಗೆ ಹಾಸ್ಯದಿಂದ ಮಾತಾಡುತ್ತಿದ್ದರು. ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.
Kannada Bible (KNCL) BSI 2016
ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು.