Mark 15:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.
Kannada BSI Bible 2016
ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಒಬ್ಬನು ಓಡಿಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು - ಬಿಡಿರಿ, ಎಲೀಯನು ಇವನನ್ನು ಇಳಿಸುವದಕ್ಕೆ ಬರುವನೇನೋ ನೋಡೋಣ ಅಂದನು.
Kannada Bible (KNCL) BSI 2016
ಆಗ ಅವರಲ್ಲೊಬ್ಬನು ಓಡಿಹೋಗಿ, ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ, ಅದನ್ನು ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಡುತ್ತಾ, “ತಾಳಿ, ಇವನನ್ನು ಶಿಲುಬೆಯಿಂದ ಬಿಡುಗಡೆಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ನೋಡೋಣ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯಲು ಕೊಟ್ಟು, “ಬಿಡಿರಿ, ಈತನನ್ನು ಕೆಳಗೆ ಇಳಿಸುವುದಕ್ಕೆ ಎಲೀಯನು ಬರುವನೋ ನೋಡೋಣ,” ಎಂದನು.