Mark 15:4 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಪಿಲಾತನು ಯೇಸುವಿಗೆ ಮತ್ತೊಮ್ಮೆ, “ಈ ಜನರು ನಿನ್ನ ಮೇಲೆ ಅನೇಕ ಅಪರಾಧಗಳನ್ನು ಹೊರಿಸುತ್ತಿದ್ದರೂ ನೀನು ಏಕೆ ಉತ್ತರಿಸುವುದಿಲ್ಲ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪಿಲಾತನು ಪುನಃ ಯೇಸುವನ್ನು, “ನೀನು ಏನೂ ಉತ್ತರಕೊಡುವುದಿಲ್ಲವೇ? ಇವರು ನಿನ್ನ ಮೇಲೆ ತುಂಬಾ ದೂರುಗಳನ್ನು ಹೇಳುತ್ತಿದ್ದಾರೆ ನೋಡು” ಎಂದು ಹೇಳಿದನು.
Kannada BSI Bible 2016
ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು.
Kannada Bible (KNCL) BSI 2016
ಆದುದರಿಂದ ಪಿಲಾತನು ಪುನಃ ಯೇಸುವನ್ನು, “ಇವರು ಇಷ್ಟೊಂದು ಆಪಾದನೆಗಳನ್ನು ನಿನ್ನ ಮೇಲೆ ಹೊರಿಸುತ್ತಿರುವಾಗ ನೀನು ಯಾವ ಉತ್ತರವನ್ನೂ ಕೊಡುವುದಿಲ್ಲವೆ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪಿಲಾತನು ತಿರುಗಿ ಯೇಸುವಿಗೆ, “ನೀನು ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು,” ಎಂದು ಕೇಳಿದನು.