Mark 15:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆಮಾಡುತ್ತಿದ್ದವರಾದ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯನ ತಾಯಿಯಾದ ಮರಿಯಳು, ಸಲೋಮೆ ಎಂಬುವರು ಹಾಗೂ ಆತನ ಸಂಗಡ ಯೆರೂಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಇದ್ದರು.
Kannada BSI Bible 2016
ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು; ಇವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆ ಮಾಡುತ್ತಿದ್ದವರಾದ ಮಗ್ದಲದ ಮರಿಯ, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯ, ಸಲೋಮೆ ಎಂಬವರೂ ಆತನ ಸಂಗಡ ಯೆರೂಸಲೇವಿುಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರೂ ಇದ್ದರು.
Kannada Bible (KNCL) BSI 2016
ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿ ಮರಿಯಳು, ಸಲೋಮೆಯು ಇದ್ದರು.