Mark 15:41 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು.
Kannada BSI Bible 2016
(ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
Kannada Bible (KNCL) BSI 2016
ಇವರು, ಯೇಸು ಗಲಿಲೇಯದಲ್ಲಿ ಇದ್ದಾಗ ಅವರನ್ನು ಹಿಂಬಾಲಿಸಿ, ಉಪಚಾರ ಮಾಡಿದ್ದರು. ಯೇಸುವಿನ ಸಂಗಡ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಮಹಿಳೆಯರು ಅಲ್ಲಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಅವರನ್ನು ಹಿಂಬಾಲಿಸಿ, ಉಪಚರಿಸಿದರು. ಯೇಸುವಿನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರೂ ಅಲ್ಲಿದ್ದರು.