Mark 15:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.
Kannada BSI Bible 2016
ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬವನು ಬಂದು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. ಇವನು ಹಿರೀಸಭೆಯವರಲ್ಲಿ ಘನವಂತನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು.
Kannada Bible (KNCL) BSI 2016
ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು.