Mark 15:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಿಲಾತನು, ಅವನು ಇಷ್ಟು ಬೇಗ ಸತ್ತು ಹೋದನೋ ಎಂದು ಹೇಳಿ ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ, ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿದನು.
Kannada BSI Bible 2016
ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಿಲಾತನು - ಅವನು ಇಷ್ಟು ಬೇಗ ಸತ್ತನೋ ಎಂದು ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ - ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿ
Kannada Bible (KNCL) BSI 2016
ಯೇಸು ಇಷ್ಟುಬೇಗನೆ ಸತ್ತಿದ್ದಾರೆಂದು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಅವನು ಶತಾಧಿಪತಿಯನ್ನು ಕರೆಯಿಸಿ, “ಯೇಸು ಈಗಾಗಲೇ ಮೃತನಾದನೋ?” ಎಂದು ವಿಚಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ