Mark 15:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿ ಪಸ್ಕಹಬ್ಬದಲ್ಲಿ ಜನರು ಬೇಡಿದ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಅಧಿಕಾರಕ್ಕೆ ಸೇರಿದ ಪದ್ಧತಿಯಾಗಿತ್ತು.
Kannada BSI Bible 2016
ಆ ಹಬ್ಬದಲ್ಲಿ ಜನರು ಬೇಡಿ ಕೊಂಡ ಒಬ್ಬ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಹಬ್ಬದಲ್ಲಿ ಜನರು ಬೇಡಿದ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.
Kannada Bible (KNCL) BSI 2016
ಪ್ರತಿ ಪಾಸ್ಕಹಬ್ಬದ ಸಂದರ್ಭದಲ್ಲಿ, ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಪದ್ಧತಿಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಬ್ಬದಲ್ಲಿ ಜನರು ಕೋರಿದ ಒಬ್ಬ ಸೆರೆಯಾಳನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.