Mark 15:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.
Kannada BSI Bible 2016
ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಬರಬ್ಬನೆಂಬವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆಪಾತಕ ಮಾಡಿದ ದಂಗೆಗಾರರ ಕೂಡ ಕಟ್ಟಿಹಾಕಿದ್ದರು.
Kannada Bible (KNCL) BSI 2016
ದಂಗೆಯೊಂದರಲ್ಲಿ ಕೊಲೆ ಮಾಡಿದ್ದ ಕೆಲವರು ಈ ಸಮಯದಲ್ಲಿ ಸೆರೆಮನೆಯಲ್ಲಿ ಇದ್ದರು. ಇವರೊಡನೆ ಬರಬ್ಬ ಎಂಬವನೂ ಸೆರೆಯಲ್ಲಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಂಗೆ ಮಾಡಿದವರೊಂದಿಗೆ ಬಂಧಿಸಲಾದ ಆ ದಂಗೆಯಲ್ಲಿ ಕೊಲೆಮಾಡಿದ ಬರಬ್ಬನೆಂಬ ಹೆಸರುಳ್ಳವನೊಬ್ಬನು ಸೆರೆಯಲ್ಲಿ ಇದ್ದನು.