Mark 16:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
Kannada BSI Bible 2016
ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಬ್ಬತ್‍ದಿನ ಕಳೆದ ಮೇಲೆ, ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಆತನ ದೇಹಕ್ಕೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡರು.
Kannada Bible (KNCL) BSI 2016
ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.