Mark 16:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
Kannada BSI Bible 2016
ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
Kannada Bible (KNCL) BSI 2016
ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.