Mark 16:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.
Kannada BSI Bible 2016
ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಷಪದಾರ್ಥವನ್ನೇನಾದರೂ ಕುಡಿದರೂ ಅವರಿಗೆ ಯಾವ ಕೇಡೂ ಆಗುವದಿಲ್ಲ; ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಗುಣವಾಗುವದು ಎಂದು ಹೇಳಿದನು.
Kannada Bible (KNCL) BSI 2016
ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.