Mark 16:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
Kannada BSI Bible 2016
ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
Kannada Bible (KNCL) BSI 2016
ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.