Mark 16:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
Kannada BSI Bible 2016
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತ್ತಲಾಗಿ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಕೂಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸುತ್ತಾ ಇದ್ದನು.]
Kannada Bible (KNCL) BSI 2016
ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.