Mark 16:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಈ ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
Kannada BSI Bible 2016
ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಿಗೆ ಮುಚ್ಚಿದ್ದ ಕಲ್ಲು ಬಹಳ ದೊಡ್ಡದಾಗಿದ್ದದರಿಂದ ಅವರು - ಸಮಾಧಿಯ ಬಾಗಿಲಿಂದ ಆ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರಿದ್ದಾರೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಾ ಇರಲಾಗಿ
Kannada Bible (KNCL) BSI 2016
“ಸಮಾಧಿಯ ದ್ವಾರಕ್ಕೆ ಮುಚ್ಚಿರುವ ಕಲ್ಲನ್ನು ನಮಗೆ ಉರುಳಿಸಿಕೊಡುವವರು ಯಾರು?” ಎಂದು ಅವರು ತಮ್ಮತಮ್ಮಲ್ಲಿ ಮಾತನಾಡಿಕೊಳ್ಳುತ್ತಿದ್ದರು. ಏಕೆಂದರೆ, ಆ ಕಲ್ಲು ಬಹಳ ದೊಡ್ಡದಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಮಾಧಿಯ ದ್ವಾರದಿಂದ ಆ ಬಂಡೆಯನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.