Mark 16:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯರು ಸಮಾಧಿಯೊಳಗೆ ಹೋದಾಗ ಬಿಳುಪಾದ ನಿಲುವಂಗಿ ಧರಿಸಿದ್ದ ಒಬ್ಬ ಯುವಕನು ಸಮಾಧಿಯ ಬಲಗಡೆ ಕುಳಿತಿರುವುದನ್ನು ಕಂಡು ಭಯಗೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
Kannada BSI Bible 2016
ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸಮಾಧಿಯೊಳಕ್ಕೆ ಹೋಗಿ ಒಬ್ಬ ಯೌವನಸ್ಥನು ಬಿಳೀ ಅಂಗಿಯನ್ನು ತೊಟ್ಟುಕೊಂಡು ಬಲಗಡೆ ಕೂತಿರುವದನ್ನು ಕಂಡು ಬೆಚ್ಚಿ ಬೆರಗಾದರು.
Kannada Bible (KNCL) BSI 2016
ಸಮಾಧಿಯೊಳಕ್ಕೆ ಪ್ರವೇಶಿಸಿ ನೋಡುವಾಗ, ಬಿಳಿಯ ಬಟ್ಟೆ ಧರಿಸಿದ್ದ ಯುವಕನೊಬ್ಬನು ಅಲ್ಲಿ ಬಲಗಡೆ ಕುಳಿತಿರುವುದನ್ನು ಕಂಡು, ಅವರು ಬೆಚ್ಚಿಬಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.