Mark 16:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
Kannada BSI Bible 2016
ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.
Kannada Bible (KNCL) BSI 2016
ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.