Mark 16:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.
Kannada BSI Bible 2016
ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ - ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ ಎಂದು ಹೇಳಿದನು.
Kannada Bible (KNCL) BSI 2016
ಈಗ ನೀವು ಹೋಗಿ ಪೇತ್ರನಿಗೂ ಮಿಕ್ಕ ಶಿಷ್ಯರಿಗೂ, ‘ಯೇಸು ನಿಮಗೆ ಮೊದಲೇ ತಿಳಿಸಿದಂತೆ, ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು. ಅವರನ್ನು ಅಲ್ಲೇ ಕಾಣುವಿರಿ,’ ಎಂದು ತಿಳಿಸಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.