Mark 16:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
Kannada BSI Bible 2016
ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಭ್ರಮೆಹಿಡಿದವರಾಗಿ ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡದರಿಂದ ಯಾರಿಗೂ ಏನೂ ಹೇಳಲಿಲ್ಲ.
Kannada Bible (KNCL) BSI 2016
ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ, ಸಮಾಧಿಯಿಂದ ಹೊರಕ್ಕೆ ಬಂದು, ಅಲ್ಲಿಂದ ಓಡಿಹೋದರು. ಭಯದ ನಿಮಿತ್ತ ಅವರು ಯಾರಿಗೂ ಏನನ್ನೂ ಹೇಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.