Mark 16:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.
Kannada BSI Bible 2016
ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆಕೆಗೆ ಏಳು ದೆವ್ವಗಳನ್ನು ಬಿಡಿಸಿದ್ದನು.
Kannada Bible (KNCL) BSI 2016
ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.