Mark 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕೂಡಲೇ ರೋಗಿಯು ಎದ್ದುನಿಂತು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಅಲ್ಲಿಂದ ಹೊರಗೆ ಹೋದನು. ಇದನ್ನು ಕಂಡ ಆ ಜನರೆಲ್ಲರೂ ಆಶ್ಚರ್ಯಚಕಿತರಾಗಿ, “ನಾವು ಹಿಂದೆಂದೂ ಇಂಥ ಸಂಗತಿಯನ್ನು ನೋಡಿಯೇ ಇಲ್ಲ” ಎಂದು ಹೇಳಿ ದೇವರನ್ನು ಕೊಂಡಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
Kannada BSI Bible 2016
ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಎದ್ದು ಕೂಡಲೆ ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟು ಹೋದನು. ಅದಕ್ಕೆ ಎಲ್ಲರು ಬೆರಗಾಗಿ - ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ ಇಲ್ಲವೆಂದು ಹೇಳುತ್ತಾ ದೇವರನ್ನು ಕೊಂಡಾಡಿದರು.
Kannada Bible (KNCL) BSI 2016
ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!\, ಎಂದು ದೇವರನ್ನು ಕೊಂಡಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.