Mark 2:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತೆ ಸರೋವರಕ್ಕೆ ಹೋದನು. ಅನೇಕ ಜನರು ಆತನನ್ನು ಹಿಂಬಾಲಿಸಿ ಅಲ್ಲಿಗೆ ಹೋದದ್ದರಿಂದ ಆತನು ಅವರಿಗೆ ಉಪದೇಶಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.
Kannada BSI Bible 2016
ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಹೊರಟು ತಿರಿಗಿ ಸಮುದ್ರದ ಬಳಿಗೆ ಹೋದನು. ಜನರ ಗುಂಪೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶಮಾಡಿದನು.
Kannada Bible (KNCL) BSI 2016
ಯೇಸುಸ್ವಾಮಿ ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಪುನಃ ಸರೋವರದ ತೀರಕ್ಕೆ ಹೋದರು. ಜನರೆಲ್ಲರೂ ಯೇಸುವಿನ ಬಳಿಗೆ ಬಂದರು. ಯೇಸು ಅವರಿಗೆ ಉಪದೇಶಿಸಿದರು.