Mark 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದಾಗ ಸುಂಕವಸೂಲಿ ಮಾಡುತ್ತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡನು. ಲೇವಿಯು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಆಗ ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
Kannada BSI Bible 2016
ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು [ಅಲ್ಲಿಂದ] ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನ ಹಿಂದೆ ಹೋದನು.
Kannada Bible (KNCL) BSI 2016
ಅಲ್ಲಿಂದ ಹೊರಟುಹೋಗುತ್ತಿರುವಾಗ ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದ ಕಟ್ಟೆಯಲ್ಲಿ ಕುಳಿತಿದ್ದ ಅಲ್ಫಾಯನ ಮಗ ಲೇವಿಯನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.