Mark 2:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಈ ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.
Kannada BSI Bible 2016
ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಆತನು ಅವನ ಮನೆಯೊಳಗೆ ಊಟಕ್ಕೆ ಕೂತಿರುವಲ್ಲಿ, ಬಹು ಮಂದಿ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಪಂಙ್ತಿಯಲ್ಲೇ ಕೂತುಕೊಂಡರು.
Kannada Bible (KNCL) BSI 2016
ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು.