Mark 2:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
Kannada BSI Bible 2016
ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥವರು ಬಹು ಮಂದಿ ಇದ್ದರು. ಫರಿಸಾಯರಾದ ಶಾಸ್ತ್ರಿಗಳು ಆತನ ಹಿಂದೆ ಹೋಗಿ ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟಮಾಡುವದನ್ನು ಕಂಡು ಆತನ ಶಿಷ್ಯರಿಗೆ - ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುತ್ತಾನೆ ನೋಡಿರಿ ಎಂದು ಹೇಳಿದರು.
Kannada Bible (KNCL) BSI 2016
ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.