Mark 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ಅವರಿಗೆ, “ಆರೋಗ್ಯವಂತರಿಗೆ ವೈದ್ಯನ ಅಗತ್ಯವಿಲ್ಲ, ಆರೋಗ್ಯವಿಲ್ಲದವರಿಗೆ ವೈದ್ಯನ ಅಗತ್ಯವಿದೆ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
Kannada BSI Bible 2016
ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.
Kannada Bible (KNCL) BSI 2016
ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.