Mark 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸ ಮಾಡುತ್ತಿದ್ದರು. ಕೆಲವು ಜನರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಹಿಂಬಾಲಕರು ಉಪವಾಸ ಮಾಡುತ್ತಾರೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
Kannada BSI Bible 2016
ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸವಾಗಿದ್ದರು. ಅವರು ಆತನ ಬಳಿಗೆ ಬಂದು - ಯೋಹಾನನ ಶಿಷ್ಯರೂ ಫರಿಸಾಯರ ಶಿಷ್ಯರೂ ಉಪವಾಸಮಾಡುತ್ತಾರಲ್ಲ? ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ? ಎಂದು ಕೇಳಲು
Kannada Bible (KNCL) BSI 2016
ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತಗಳನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸಮಾಡುತ್ತಿದ್ದರು. ಆಗ ಕೆಲವರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸ ಮಾಡುತ್ತಾರೆ, ಆದರೆ ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.