Mark 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ಮದುವೆಯಲ್ಲಿ ಮದುಮಗನು ತಮ್ಮ ಜೊತೆಯಲ್ಲಿ ಇರುವಾಗ ಅವನ ಗೆಳೆಯರು ವ್ಯಸನಪಡುವುದಿಲ್ಲ. ಉಪವಾಸ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
Kannada BSI Bible 2016
ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸಮಾಡಲಾಗದು.
Kannada Bible (KNCL) BSI 2016
ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ಹೇಗೆ ಉಪವಾಸ ಮಾಡುವರು? ಮದುಮಗನು ಅವರ ಸಂಗಡ ಇರುವವರೆಗೆ ಅವರು ಉಪವಾಸ ಮಾಡಲಾಗದು.