Mark 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಗೆಯೇ, ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಬುದ್ದಲಿಗಳಲ್ಲಿ ಹಾಕಿಡುವುದಿಲ್ಲ. ಏಕೆಂದರೆ ಅದು ಬುದ್ದಲಿಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಹಾಳಾಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
Kannada BSI Bible 2016
ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವದಿಲ್ಲ; ಇಟ್ಟರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಬುದ್ದಲಿಗಳು ಎರಡೂ ಕೆಟ್ಟುಹೋಗುವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ [ಹಾಕಿಡತಕ್ಕದ್ದು] ಎಂದು ಹೇಳಿದನು.
Kannada Bible (KNCL) BSI 2016
ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ,” ಎಂದು ಹೇಳಿದರು.