Mark 2:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಬ್ಬತ್‌ದಿನದಂದು, ಯೇಸು ತನ್ನ ಶಿಷ್ಯರೊಂದಿಗೆ ಕೆಲವು ಹೊಲಗಳ ಮೂಲಕ ಹಾದುಹೋಗುತ್ತಿದ್ದನು. ಶಿಷ್ಯರು ತಿನ್ನಲು ಕೆಲವು ಕಾಳಿನ ತೆನೆಗಳನ್ನು ಕಿತ್ತುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
Kannada BSI Bible 2016
ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಸಬ್ಬತ್‍ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ನಡೆಯುತ್ತಾ ತೆನೆಗಳನ್ನು ಮುರುಕೊಂಡರು.
Kannada Bible (KNCL) BSI 2016
ಅದೊಂದು ಸಬ್ಬತ್‍ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದುಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಸಬ್ಬತ್ ದಿನದಂದು ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಯೇಸುವಿನ ಶಿಷ್ಯರು ನಡೆಯುತ್ತಾ ಹೋಗುವಾಗ ತೆನೆಗಳನ್ನು ಮುರಿದುಕೊಂಡರು.