Mark 2:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರಿಸಾಯರು ಇದನ್ನು ಕಂಡು ಯೇಸುವಿಗೆ, “ನಿನ್ನ ಶಿಷ್ಯರು ಹೀಗೇಕೆ ಮಾಡುತ್ತಾರೆ? ಸಬ್ಬತ್‌ದಿನದಂದು ಹೀಗೆ ಮಾಡುವುದು ಯೆಹೊದ್ಯರ ನಿಯಮಗಳಿಗೆ ವಿರುದ್ಧವಲ್ಲವೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.
Kannada BSI Bible 2016
ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್‌ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರಿಸಾಯರು ಆತನನ್ನು - ನೋಡು, ಇವರು ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ಯಾಕೆ ಮಾಡುತ್ತಾರೆ ಎಂದು ಕೇಳಿದರು.
Kannada Bible (KNCL) BSI 2016
ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರಿಸಾಯರು ಯೇಸುವಿಗೆ, “ಇಲ್ಲಿ ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಏಕೆ ಮಾಡುತ್ತಾರೆ?” ಎಂದು ಹೇಳಿದರು.