Mark 2:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದು ಮಹಾಯಾಜಕನಾದ ಅಬಿಯಾತರನ ಕಾಲ. ದಾವೀದನು ದೇವಾಲಯಕ್ಕೆ ಹೋಗಿ, ದೇವರಿಗೆ ಅರ್ಪಿಸಿದ ರೊಟ್ಟಿಯನ್ನು ತಿಂದನು. ಯಾಜಕರು ಮಾತ್ರ ಆ ರೊಟ್ಟಿಯನ್ನು ತಿನ್ನತಕ್ಕದ್ದೆಂದು ಮೋಶೆಯ ಧರ್ಮಶಾಸ್ತ್ರ ಹೇಳುತ್ತದೆ. ದಾವೀದನು ತನ್ನೊಂದಿಗಿದ್ದ ಜನರಿಗೂ ಆ ರೊಟ್ಟಿಯನ್ನು ನೀಡಿದನು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,
Kannada BSI Bible 2016
ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವರಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ? ಎಂದು ಹೇಳಿದನು.
Kannada Bible (KNCL) BSI 2016
ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.