Mark 2:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನೆಯು ಜನರಿಂದ ತುಂಬಿಹೋಗಿದ್ದುದರಿಂದ ಅವರು ಅವನನ್ನು ಯೇಸುವಿನ ಬಳಿಗೆ ತರಲಾಗಲಿಲ್ಲ. ಆದ್ದರಿಂದ ಅವರು ಯೇಸುವಿದ್ದ ಮನೆಯ ಮೇಲ್ಛಾವಣೆಯ ಮೇಲಕ್ಕೆ ಹೋಗಿ ಯೇಸುವಿದ್ದ ಸ್ಥಳದ ಮೇಲೆ ಹೆಂಚುಗಳನ್ನು ತೆಗೆದುಹಾಕಿದರು. ಹೀಗೆ ಅಲ್ಲಿ ಒಂದು ದ್ವಾರವನ್ನು ಮಾಡಿ ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
Kannada BSI Bible 2016
ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಗುಂಪಾಗಿದ್ದದರಿಂದ ಅವರು ಆತನ ಹತ್ತಿರಕ್ಕೆ ಸೇರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ದ್ವಾರಮಾಡಿ ಪಾರ್ಶ್ವವಾಯುರೋಗಿಯು ಮಲಗಿದ್ದ ಹಾಸಿಗೆಯನ್ನು ಇಳಿಸಿದರು.
Kannada Bible (KNCL) BSI 2016
ಜನಸಂದಣಿಯ ನಿಮಿತ್ತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಛಾವಣಿಯನ್ನು ತೆರೆದು, ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.