Mark 2:7 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇವನು ಹೀಗೇಕೆ ಹೇಳುತ್ತಿದ್ದಾನೆ? ಇದು ದೇವದೂಷಣೆ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಲು ಸಾಧ್ಯ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.
Kannada BSI Bible 2016
ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷವಿುಸಬಲ್ಲರು? ಎಂದು ತಮ್ಮ ತಮ್ಮ ಮನಸ್ಸಿನಲ್ಲಿ ಅಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು.