Mark 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಹೇಳುವುದೋ? ಇಲ್ಲವೇ, ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ಹೋಗು’ ಎಂದು ಹೇಳುವುದೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?
Kannada BSI Bible 2016
ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ?
Kannada Bible (KNCL) BSI 2016
ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎಂದು ಹೇಳುವುದು ಸುಲಭವೋ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎನ್ನುವುದು ಸುಲಭವೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ?