Mark 3:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
Kannada BSI Bible 2016
ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಆತನನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
Kannada Bible (KNCL) BSI 2016
ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು.