Mark 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಈ ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
Kannada BSI Bible 2016
ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಬೆಟ್ಟವನ್ನೇರಿ ತಮಗೆ ಬೇಕಾದವರನ್ನು ಕರೆದರು. ಅವರು ಯೇಸುವಿನ ಬಳಿಗೆ ಬಂದರು.