Mark 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್‌ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.
Kannada BSI Bible 2016
ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್‌ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆಲೋಚಿಸಿ ಸಬ್ಬತ್‍ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಾ ಇದ್ದರು.
Kannada Bible (KNCL) BSI 2016
ಅವನನ್ನು ಸಬ್ಬತ್‍ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು.