Mark 3:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.
Kannada BSI Bible 2016
ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮನೆಯೊಳಗೆ ಬಂದಾಗ ಜನರು ತಿರಿಗಿ ನೆರೆದದ್ದರಿಂದ ಊಟಕ್ಕೂ ಅವಕಾಶವಾಗಲಿಲ್ಲ.
Kannada Bible (KNCL) BSI 2016
ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಒಂದು ಮನೆಯೊಳಗೆ ಹೋದಾಗ, ಜನರು ತಿರುಗಿ ಗುಂಪಾಗಿ ನೆರೆದು ಬಂದದ್ದರಿಂದ ಯೇಸುವಿಗೂ ಅವರ ಶಿಷ್ಯರಿಗೂ ಊಟಮಾಡುವುದಕ್ಕೂ ಸಾಧ್ಯವಾಗಲಿಲ್ಲ.